Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:7 - ಕನ್ನಡ ಸಮಕಾಲಿಕ ಅನುವಾದ

7 ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:7
19 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.


ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.


ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.


ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ,


“ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ,


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು