Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:12 - ಕನ್ನಡ ಸಮಕಾಲಿಕ ಅನುವಾದ

12 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೆಲಸಗಾರರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ, ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:12
15 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.


ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.


ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


“ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.


ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.


ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು