2 ಪೂರ್ವಕಾಲ ವೃತ್ತಾಂತ 34:18 - ಕನ್ನಡ ಸಮಕಾಲಿಕ ಅನುವಾದ18 ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಲ್ಲದೆ, ಲೇಖಕ ಶಾಫಾನನು ಅರಸನಿಗೆ, “ಯಾಜಕ ಹಿಲ್ಕೀಯ ನನಗೊಂದು ಗ್ರಂಥವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ - ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಂದು ಹೇಳಿ ಆ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು ಅಧ್ಯಾಯವನ್ನು ನೋಡಿ |
ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.