Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಎಡಕ್ಕಾಗಲಿ ಬಲಕ್ಕಾಗಲಿ ಹೋಗದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲೇ ನೇರವಾಗಿ ಸರ್ವೇಶ್ವರನ ಚಿತ್ತಾನುಸಾರ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:2
15 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.


ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ.


“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು