24 ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.
ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.
ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”
“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”
“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”
‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.
ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.
ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.
“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’