2 ಪೂರ್ವಕಾಲ ವೃತ್ತಾಂತ 34:27 - ಕನ್ನಡ ಸಮಕಾಲಿಕ ಅನುವಾದ27 ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿ |