Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:28 - ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:28
12 ತಿಳಿವುಗಳ ಹೋಲಿಕೆ  

ಆಗ ಹಿಜ್ಕೀಯನು, “ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು,” ಎಂದುಕೊಂಡು ಯೆಶಾಯನಿಗೆ, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ!” ಎಂದನು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.


ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.


ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,


ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.


ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು