2 ಪೂರ್ವಕಾಲ ವೃತ್ತಾಂತ 34:3 - ಕನ್ನಡ ಸಮಕಾಲಿಕ ಅನುವಾದ3 ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.