Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:32 - ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಂತೆಯೇ ಎಲ್ಲ ಜೆರುಸಲೇಮಿನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು . ಜೆರುಸಲೇಮಿನವರು ಏಕದೇವರಾದ ತಮ್ಮ ಪೂರ್ವಜರ ದೇವರ ನಿಬಂಧನೆಯನ್ನು ಕೈಕೊಳ್ಳುವಂಥವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಮೇಲೆ ಎಲ್ಲಾ ಯೆರೂಸಲೇವಿುನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇವಿುನವರು ಏಕದೇವರಾದ ತಮ್ಮ ಪಿತೃಗಳ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಮೇಲೆ ಎಲ್ಲಾ ಜೆರುಸಲೇಮಿನವರಿಂದಲೂ ಮತ್ತು ಬೆನ್ಯಾಮೀನ್ಯರಿಂದಲೂ ಪ್ರಮಾಣ ಮಾಡಿಸಿದನು. ತಮ್ಮ ಪೂರ್ವಿಕರು ವಿಧೇಯರಾಗಿದ್ದ ದೇವರಿಗೆ ತಾವೂ ವಿಧೇಯರಾಗಿರುವುದಾಗಿ ಅವರು ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:32
11 ತಿಳಿವುಗಳ ಹೋಲಿಕೆ  

ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ.


ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು