Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:33 - ಕನ್ನಡ ಸಮಕಾಲಿಕ ಅನುವಾದ

33 ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೋಷೀಯನು ಇಸ್ರಾಯೇಲ್ಯರಿಗೆ ಸೇರಿದ ಎಲ್ಲಾ ಪ್ರಾಂತಗಳೊಳಗಿನ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ ಇಸ್ರಾಯೇಲ್ಯರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಸೇವಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಇಸ್ರೇಲ್ ಜನರ ಬಳಿ ನಾನಾ ಜನಾಂಗದವರ ವಿಗ್ರಹಗಳಿದ್ದವು. ಆದರೆ ಯೋಷೀಯನು ಆ ವಿಗ್ರಹಗಳನ್ನೆಲ್ಲಾ ನಾಶಮಾಡಿದನು. ಇಸ್ರೇಲರು ದೇವರಾದ ಯೆಹೋವನ ಸೇವೆಮಾಡುವಂತೆ ಯೋಷೀಯನು ಮಾಡಿದನು. ಯೋಷೀಯನು ಬದುಕಿದ್ದಷ್ಟು ಕಾಲ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಸೇವೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:33
9 ತಿಳಿವುಗಳ ಹೋಲಿಕೆ  

ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು