Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:4 - ಕನ್ನಡ ಸಮಕಾಲಿಕ ಅನುವಾದ

4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:4
21 ತಿಳಿವುಗಳ ಹೋಲಿಕೆ  

ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.


ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.


ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.


ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು