ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.
ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.
ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.
ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.
ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.