Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:13 - ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಲೇವಿಯರು ಪಾಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟರು; ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:13
11 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು. ಮರುದಿವಸದಲ್ಲಿ ಹಿಂದಿರುಗಿ ನಿಮ್ಮ ಗುಡಾರಗಳಿಗೆ ಹೋಗಬಹುದು.


ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.


“ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.


ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.


ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.


ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು