Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:16 - ಕನ್ನಡ ಸಮಕಾಲಿಕ ಅನುವಾದ

16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:16
3 ತಿಳಿವುಗಳ ಹೋಲಿಕೆ  

ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.


ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.


ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು