Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:24 - ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ, ಜೆರುಸಲೇಮಿಗೆ ತೆಗೆದುಕೊಂಡು ಹೋದರು. ಅಲ್ಲಿ ಅವನು ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಎಲ್ಲ ಯೆಹೂದ್ಯರೂ ಜೆರುಸಲೇಮಿನವರೂ ಯೋಷೀಯನ ಮರಣಕ್ಕಾಗಿ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:24
9 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.


ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.


ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.


ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು