Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:3 - ಕನ್ನಡ ಸಮಕಾಲಿಕ ಅನುವಾದ

3 “ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಲ್ಲ ಇಸ್ರಯೇಲರಿಗೆ ಉಪದೇಶಿಸತಕ್ಕವರೂ ಸರ್ವೇಶ್ವರನಿಗೆ ಪ್ರತಿಷ್ಠರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಯೇಲ್ ಅರಸನೂ ಆದ ಸೊಲೊಮೋನನು ಕಟ್ಟಿಸಿದ ಮಹಾದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿ; ಅದನ್ನು ಹೆಗಲ ಮೇಲೆ ಹೊತ್ತುಕೊಳ್ಳುವುದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಸರ್ವೇಶ್ವರನಿಗೂ ಅವರ ಪ್ರಜೆಗಳಾದ ಇಸ್ರಯೇಲರಿಗೂ ಸೇವೆಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ - ದಾವೀದನ ಮಗನೂ ಇಸ್ರಾಯೇಲ್‍ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:3
15 ತಿಳಿವುಗಳ ಹೋಲಿಕೆ  

ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.


ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.


ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.


ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”


ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.


ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು