2 ಪೂರ್ವಕಾಲ ವೃತ್ತಾಂತ 36:10 - ಕನ್ನಡ ಸಮಕಾಲಿಕ ಅನುವಾದ10 ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.