Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:13
27 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.


ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡಿದ್ದಲ್ಲದೆ, ಜನರನ್ನೂ ಹೋಗಗೊಡಿಸಲಿಲ್ಲ.


ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.


ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.


ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.


ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.


“ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,


ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.


ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು