Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:17 - ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:17
39 ತಿಳಿವುಗಳ ಹೋಲಿಕೆ  

ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


“ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.


ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.


ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.


ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.


ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಹಿರಿಯರನ್ನೂ, ಕಿರಿಯರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಯುವಕನನ್ನೂ ಯುವತಿಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು