Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:20 - ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:20
13 ತಿಳಿವುಗಳ ಹೋಲಿಕೆ  

ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,


ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ


ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;


ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.


ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.


ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು