Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:3 - ಕನ್ನಡ ಸಮಕಾಲಿಕ ಅನುವಾದ

3 ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈಜಿಪ್ಟಿನ ರಾಜನು ಜೆರುಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ 3400 ಕಿಲೋಗ್ರಾಂ ಬೆಳ್ಳಿಯನ್ನೂ 34 ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಐಗುಪ್ತದ ಅರಸನು ಯೆರೂಸಲೇವಿುಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಬಳಿಕ ಈಜಿಪ್ಟಿನ ನೆಕೋ ಯೆಹೋವಾಹಾಜನನ್ನು ಕೈದಿಯನ್ನಾಗಿ ಮಾಡಿದನು. ಯೆಹೂದದ ಜನರು ತನಗೆ ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ಕೊಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:3
3 ತಿಳಿವುಗಳ ಹೋಲಿಕೆ  

ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.


ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು