Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:1 - ಕನ್ನಡ ಸಮಕಾಲಿಕ ಅನುವಾದ

1 ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಲ್ಲದೆ ಅವನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:1
11 ತಿಳಿವುಗಳ ಹೋಲಿಕೆ  

ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.


ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.


ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.


ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.


ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.


ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.


ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು