Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:13 - ಕನ್ನಡ ಸಮಕಾಲಿಕ ಅನುವಾದ

13 ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕಾಗಿ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬದ ಹಣ್ಣುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಜಾಲರಿಯಲ್ಲಿ ಸಿಕ್ಕಿಸಲು ನಾನೂರು ದಾಳಿಂಬೆಗಳನ್ನು ಮಾಡಿದನು. ಪ್ರತಿಯೊಂದು ಜಾಲರಿಯಲ್ಲಿ ಎರಡು ಸಾಲಾಗಿ ದಾಳಿಂಬೆಗಳನ್ನು ಸಿಕ್ಕಿಸಿಟ್ಟನು. ಈ ಜಾಲರಿಯು ಕಂಬದ ಮೇಲ್ಭಾಗವನ್ನು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:13
9 ತಿಳಿವುಗಳ ಹೋಲಿಕೆ  

ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೃತಿಯ ಸಮೀಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ, ಇನ್ನೂರು ದಾಳಿಂಬೆಗಳು ಸಾಲುಗಳಾಗಿ ಸುತ್ತಲೂ ಇದ್ದವು. ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.


ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು.


ನಿನ್ನ ತೋಟದಲ್ಲಿ ದಾಳಿಂಬೆ ವನವೂ ಫಲಕೊಡುವ ಉತ್ತಮ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಇವೆ.


ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳು,


ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.


ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.


ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.


ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು