Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:22 - ಕನ್ನಡ ಸಮಕಾಲಿಕ ಅನುವಾದ

22 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಪವಿತ್ರಸ್ಥಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:22
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.


ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.


ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,


ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.


ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು.


ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.


ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.


ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.


ಅದರ ಮೇಲೆ ಕೆರೂಬಿಗಳ, ಖರ್ಜೂರ ಗಿಡಗಳ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಈ ಕೆತ್ತನೆಗಳ ಮೇಲೆ ಸಮವಾಗಿ ಬಂಗಾರದ ತಗಡನ್ನು ಹೊದಿಸಿದನು.


ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು