2 ಪೂರ್ವಕಾಲ ವೃತ್ತಾಂತ 4:6 - ಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಅವನು ಹತ್ತು ಗಂಗಾಳಗಳನ್ನು ಮಾಡಿಸಿ ಸರ್ವಾಂಗಹೋಮಸಮರ್ಪಣೆಯ ಸಾಮಾನು ತೊಳೆದು ಶುದ್ಧಮಾಡುವದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಸಮುದ್ರವೆನಿಸಿಕೊಳ್ಳುವ ಪಾತ್ರೆಯು ಯಾಜಕರ ಸ್ನಾನಕ್ಕಾಗಿ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು. ಅಧ್ಯಾಯವನ್ನು ನೋಡಿ |