Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:9 - ಕನ್ನಡ ಸಮಕಾಲಿಕ ಅನುವಾದ

9 ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮತ್ತೆ, ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಾಡಿಸಿ ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಇಟ್ಟನು. ಅವುಗಳ ಕದಗಳನ್ನು ಕಂಚಿನ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಹಾಪ್ರಾಕಾರಕ್ಕೆ ಬಾಗಲುಗಳನ್ನೂ ಮಾಡಿಸಿದನು; ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾಅಂಗಳವನ್ನೂ ಮಹಾಅಂಗಳಕ್ಕೆ ಬಾಗಿಲುಗಳನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:9
6 ತಿಳಿವುಗಳ ಹೋಲಿಕೆ  

ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.


ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ದೊಡ್ಡ ಅಂಗಳವು ಸುತ್ತಲೂ ಮೂರು ತರ ಕೆತ್ತಿದ ಕಲ್ಲುಗಳೂ, ಒಂದು ತರ ದೇವದಾರು ಮರದ ತೊಲೆಗಳೂ ಆಗಿದ್ದವು. ಯೆಹೋವ ದೇವರ ಆಲಯದ ಒಳ ಅಂಗಳಕ್ಕೂ, ಆಲಯದ ಮಂಟಪಕ್ಕೂ ಹಾಗೆಯೇ ಇದ್ದವು.


ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


“ಗುಡಾರದ ಅಂಗಳವನ್ನು ಮಾಡಬೇಕು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಬೇಕು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು.


ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು