2 ಪೂರ್ವಕಾಲ ವೃತ್ತಾಂತ 5:10 - ಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್‍ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದರಲ್ಲಿ ಎರಡು ಕಲ್ಲಿನ ಹಲಿಗೆಗಳು ಹೊರತಾಗಿ ಬೇರೇನೂ ಇರಲಿಲ್ಲ; ಯೆಹೋವನು ಐಗುಪ್ತದೇಶದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಡಂಬಡಿಕೆಯ ಪೆಟ್ಟಿಗೆಯೊಳಗೆ ಎರಡು ಕಲ್ಲಿನ ಹಲಗೆಗಳು ಮಾತ್ರ ಇದ್ದವು. ಹೋರೇಬ್ ಬೆಟ್ಟದಲ್ಲಿ ಮೋಶೆಯು ಈ ಕಲ್ಲಿನ ಹಲಗೆಗಳನ್ನು ಪೆಟ್ಟಿಗೆಯೊಳಗಿಟ್ಟನು. ಆ ಬೆಟ್ಟದಲ್ಲಿ ಯೆಹೋವನು ಈಜಿಪ್ಟಿನಿಂದ ಬಿಡುಗಡೆ ಹೊಂದಿದ ಇಸ್ರೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಅಧ್ಯಾಯವನ್ನು ನೋಡಿ |