Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:11 - ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಿಬಂದಿದ್ದ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:11
13 ತಿಳಿವುಗಳ ಹೋಲಿಕೆ  

ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.


“ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.


ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.


ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.


ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.


ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ತರುವುದಕ್ಕೆ ಯಾಜಕರೂ, ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.


ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು