Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:12 - ಕನ್ನಡ ಸಮಕಾಲಿಕ ಅನುವಾದ

12 ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾರು ಬಟ್ಟೆಗಳನ್ನು ಧರಿಸಿಕೊಂಡು ತಾಳ ಸ್ವರಮಂಡಲ ಕಿನ್ನರಿ ಇವುಗಳನ್ನು ಹಿಡಿದುಕೊಂಡ ಲೇವಿಯ ಗಾಯಕರಾದ ಆಸಾಫ್‍ಹೇಮಾನ್ ಯೆದುತೂನರೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:12
26 ತಿಳಿವುಗಳ ಹೋಲಿಕೆ  

ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು.


ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು,


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.


ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.


ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.


ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,


ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು.


ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.


ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು