Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇವಿುಗೆ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:2
21 ತಿಳಿವುಗಳ ಹೋಲಿಕೆ  

“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.


ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.


ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.


ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.


ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.


ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.


ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೆಯೇಲ್ ಇವನ ಮಗ ಲೇಖಕನಾದ ಶೆಮಾಯನು ಅರಸನ ಮುಂದೆಯೂ; ಪ್ರಧಾನರು, ಯಾಜಕನಾದ ಚಾದೋಕನು, ಅಬಿಯಾತರನ ಮಗ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಅವರ ಹೆಸರುಗಳನ್ನು ಬರೆದನು. ಎಲಿಯಾಜರನಿಗೋಸ್ಕರ ಒಂದು ಶ್ರೇಷ್ಠ ಮನೆ ತೆಗೆದುಕೊಳ್ಳಲಾಯಿತು. ಅದರಂತೆಯೇ, ಈತಾಮಾರನಿಗೋಸ್ಕರವೂ ಒಂದು ತೆಗೆದುಕೊಳ್ಳಲಾಯಿತು.


ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.


ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.


“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.


ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.


ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು.


ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು