Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಪ್ರಾರ್ಥನೆಗಾಗಿ ತನ್ನ ಕೈಗಳನ್ನು ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ಕೈಗಳನ್ನೆತ್ತಿಕೊಂಡು ಪ್ರಾರ್ಥನಾ ಭಂಗಿಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ಕೈಗಳನ್ನೆತ್ತಿಕೊಂಡು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಜ್ಞವೇದಿಕೆಯ ಮುಂದೆ ಸೊಲೊಮೋನನು ಇಸ್ರೇಲರ ಜನರೆದುರಿಗೆ ನಿಂತುಕೊಂಡು ತನ್ನ ಕೈಗಳನ್ನೆತ್ತಿಕೊಂಡು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:12
15 ತಿಳಿವುಗಳ ಹೋಲಿಕೆ  

ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.


ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು. ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು.


“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,


ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು.


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಯೆಹೋವ ದೇವರು ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ,” ಎಂದನು.


ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು