Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:26 - ಕನ್ನಡ ಸಮಕಾಲಿಕ ಅನುವಾದ

26 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಅವರ ಪಾಪಗಳ ನಿಮಿತ್ತ ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ, ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ, ಈ ಆಲಯದ ಕಡೆಗೆ ತಿರುಗಿಕೊಂಡು, ನಿಮ್ಮನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರ ಪಾಪಗಳ ನಿವಿುತ್ತವಾಗಿ ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:26
20 ತಿಳಿವುಗಳ ಹೋಲಿಕೆ  

ನಿಮ್ಮ ತಲೆಯ ಮೇಲಿರುವ ಆಕಾಶವು ಕಂಚಿನಂತೆಯೂ ಕೆಳಗಿರುವ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.


ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.


ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.


“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು