Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:32 - ಕನ್ನಡ ಸಮಕಾಲಿಕ ಅನುವಾದ

32 “ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ಮಹಾನಾಮದ ನಿಮಿತ್ತ ದೂರದೇಶದಿಂದ ಬಂದ ಒಬ್ಬ ಪರದೇಶಿಯು, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದಂಥ ಒಬ್ಬ ಪರದೇಶಿಯು ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ಸಂದೇಶವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದಂಥ ಒಬ್ಬೊಬ್ಬ ಪರದೇಶಿಯೂ ನಿನ್ನ ನಾಮಮಹತ್ತು ಭುಜಬಲ ಶಿಕ್ಷಾಹಸ್ತ ಇವುಗಳ ವರ್ತಮಾನ ಕೇಳಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಇಸ್ರೇಲಿನವನಲ್ಲದ ಪರದೇಶಿಯು ನಿನ್ನ ಪರಾಕ್ರಮವನ್ನೂ ನಿನ್ನ ಸಾಮರ್ಥ್ಯವನ್ನೂ ಕಂಡು ಕೇಳಿ ಇಲ್ಲಿಗೆ ಬಂದು ಈ ಆಲಯದ ಮುಂದೆ ನಿಂತುಕೊಂಡು ನಿನಗೆ ಪ್ರಾರ್ಥಿಸುವದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:32
31 ತಿಳಿವುಗಳ ಹೋಲಿಕೆ  

ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.


ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.”


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.


ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗಗಳಲ್ಲಿ ನಡೆಯುವರು.


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು