Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:34 - ಕನ್ನಡ ಸಮಕಾಲಿಕ ಅನುವಾದ

34 “ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಆ ಆಲಯದ ಕಡೆಗೂ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವದಕ್ಕೋಸ್ಕರ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:34
19 ತಿಳಿವುಗಳ ಹೋಲಿಕೆ  

ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು.


ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು