Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:36 - ಕನ್ನಡ ಸಮಕಾಲಿಕ ಅನುವಾದ

36 “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು; ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:36
22 ತಿಳಿವುಗಳ ಹೋಲಿಕೆ  

ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


“ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು