Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:6
23 ತಿಳಿವುಗಳ ಹೋಲಿಕೆ  

“ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.


ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.


ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.


ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.


ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.


ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.


ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು