2 ಪೂರ್ವಕಾಲ ವೃತ್ತಾಂತ 7:1 - ಕನ್ನಡ ಸಮಕಾಲಿಕ ಅನುವಾದ1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನನು ಪ್ರಾರ್ಥಿಸುವದನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿಬಿದ್ದು ಸರ್ವಾಂಗ ಹೋಮದ್ರವ್ಯಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು, ಯೆಹೋವನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು. ಅಧ್ಯಾಯವನ್ನು ನೋಡಿ |