Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:10 - ಕನ್ನಡ ಸಮಕಾಲಿಕ ಅನುವಾದ

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:10
22 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.


ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.


ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.


ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.


ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.


“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.


ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.


ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.


ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.


“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು