2 ಪೂರ್ವಕಾಲ ವೃತ್ತಾಂತ 7:14 - ಕನ್ನಡ ಸಮಕಾಲಿಕ ಅನುವಾದ14 ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು. ಅಧ್ಯಾಯವನ್ನು ನೋಡಿ |