Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:19 - ಕನ್ನಡ ಸಮಕಾಲಿಕ ಅನುವಾದ

19 “ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ನೀವು ದ್ರೋಹಿಗಳಾಗಿ ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನು ಹಿಂಬಾಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:19
15 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:


“ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.


ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು