Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನ ಆ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ತೇಜಸ್ಸು ಆತನ ಆಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:2
7 ತಿಳಿವುಗಳ ಹೋಲಿಕೆ  

ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಯೆಹೋವ ದೇವರ ಮಹಿಮೆಯ ದೃಶ್ಯವು ಇಸ್ರಾಯೇಲರ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ದಹಿಸುವ ಅಗ್ನಿಯಂತಿತ್ತು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು.


ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.


ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು