Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:22 - ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅವರಿಗೆ - ಈ ದೇಶದವರು ತಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ ಎಂಬ ಉತ್ತರ ಸಿಕ್ಕುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಜನರು, ‘ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದ್ದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:22
10 ತಿಳಿವುಗಳ ಹೋಲಿಕೆ  

ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.


ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು