Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:3 - ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:3
26 ತಿಳಿವುಗಳ ಹೋಲಿಕೆ  

ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.


“ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.


ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.


ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.


ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.


ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.


ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.


ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು