2 ಪೂರ್ವಕಾಲ ವೃತ್ತಾಂತ 7:7 - ಕನ್ನಡ ಸಮಕಾಲಿಕ ಅನುವಾದ7 ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸೊಲೊಮೋನನು ಮಾಡಿಸಿದ್ದ ಕಂಚಿನ ಬಲಿಪೀಠವು, ಸಮರ್ಪಣೆಯಾದ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಶಾಂತಿಸಮಾಧಾನಬಲಿಯ ಕೊಬ್ಬನ್ನೂ ಹಿಡಿಯಲಾಗಲಿಲ್ಲ. ಆದ್ದರಿಂದ ಅವನು ಸರ್ವೇಶ್ವರನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯು ಸಮರ್ಪಣೆಯಾಗುವ ಸರ್ವಾಂಗ ಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದ್ದರಿಂದ ಅವನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಆ ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕೆಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಲು ಆಗದೆಹೋಯಿತು. ಅಧ್ಯಾಯವನ್ನು ನೋಡಿ |