Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:14 - ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:14
33 ತಿಳಿವುಗಳ ಹೋಲಿಕೆ  

ದ್ವಾರಪಾಲಕರು ಯಾರೆಂದರೆ: ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು.


ದೇವರ ಮನುಷ್ಯನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರೀಯನ ಸಹೋದರರಾದ ಶೆಮಾಯ, ಅಜರಯೇಲ್, ಮಿಲಲೈ, ಗಿಲಲೈ, ಮಾಯೈ, ನೆತನೆಯೇಲ್, ಯೆಹೂದ, ಹನಾನೀ ಎಂಬವರು ನಡೆದರು; ನಿಯಮಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.


ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.


ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,


ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.


ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.


ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.


ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.


ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.


“ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.


ದಾವೀದನು ಮುದುಕನಾದ ಮೇಲೆ ತನ್ನ ಮಗ ಸೊಲೊಮೋನನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಿದನು.


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.


ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.


ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು.


ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು.


ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.


ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.


ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.


ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.


ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು