2 ಪೂರ್ವಕಾಲ ವೃತ್ತಾಂತ 8:18 - ಕನ್ನಡ ಸಮಕಾಲಿಕ ಅನುವಾದ18 ಹೀರಾಮನು ತನ್ನ ಸೇವಕರ ಮುಖಾಂತರ ಹಡಗುಗಳನ್ನೂ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ, ಅಲ್ಲಿಂದ ಅರಸನಾದ ಸೊಲೊಮೋನನಿಗೆ 15,000 ಕಿಲೋಗ್ರಾಂ ಬಂಗಾರವನ್ನು ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ ಸಮುದ್ರಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು. ಅಧ್ಯಾಯವನ್ನು ನೋಡಿ |