2 ಪೂರ್ವಕಾಲ ವೃತ್ತಾಂತ 8:5 - ಕನ್ನಡ ಸಮಕಾಲಿಕ ಅನುವಾದ5 ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳಿಗೆ ಪೌಳಿಗೋಡೆ, ಕದ, ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳನ್ನು ಪೌಳಿಗೋಡೆ ಕದ ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು. ಅಧ್ಯಾಯವನ್ನು ನೋಡಿ |
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.