Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:6 - ಕನ್ನಡ ಸಮಕಾಲಿಕ ಅನುವಾದ

6 ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಾಲಾತೂರು, ತನ್ನ ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಮತ್ತು ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:6
13 ತಿಳಿವುಗಳ ಹೋಲಿಕೆ  

ಬಾ, ವಧುವೇ, ಲೆಬನೋನಿನಿಂದ ಬಾ, ಲೆಬನೋನಿನಿಂದ ನನ್ನೊಡನೆ ಬಾ. ಅಮಾನದ ಶಿಖರಗಳಿಂದ, ಸೆನೀರ್, ಹೆರ್ಮೋನ್ ಶಿಖರಗಳಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ಇಳಿದು ಬಾ.


ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.


ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಅವನು ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ, ಹಮಾತಿನಲ್ಲಿರುವ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.


ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.


ಅವನು ಲೆಬನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು 44 ಮೀಟರ್ ಉದ್ದ, 22 ಮೀಟರ್ ಅಗಲ, 13.5 ಮೀಟರ್ ಎತ್ತರವೂ ಆಗಿತ್ತು. ಅದು ನಾಲ್ಕು ಸಾಲು ದೇವದಾರು ಕಂಬಗಳ ಮೇಲೆ ಇತ್ತು. ದೇವದಾರು ತೊಲೆಗಳು ಕಂಬಗಳ ಮೇಲೆ ಇದ್ದವು.


ಎಲ್ತೆಕೇ, ಗಿಬ್ಬೆತೋನ್, ಬಾಲಾತ್,


ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ತಾನು ಬಯಸಿದ್ದೆಲ್ಲವನ್ನೂ ಸಾಧಿಸಿದನು.


ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು.


ಸೊಲೊಮೋನನು ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು