Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:7 - ಕನ್ನಡ ಸಮಕಾಲಿಕ ಅನುವಾದ

7 ಸೊಲೊಮೋನನು ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರಿಂದ ಸಂಹೃತರಾಗದೆ ಕಾನಾನ್ ನಾಡಿನಲ್ಲಿ ಅಳಿದುಳಿದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ ಬಿಟ್ಟಿಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಇಸ್ರಾಯೇಲ್ಯರಿಂದ ಸಂಹೃತರಾಗದೆ ಕಾನಾನ್ ದೇಶದಲ್ಲಿ ಉಳಿದ ಹಿತ್ತಿಯ ಅಮೋರಿಯ ಪೆರಿಜೀಯ ಹಿವ್ವಿಯ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ [ತನ್ನ ಕೆಲಸಕ್ಕಾಗಿ] ಬಿಟ್ಟಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7-8 ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:7
7 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.


ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು