2 ಪೂರ್ವಕಾಲ ವೃತ್ತಾಂತ 8:9 - ಕನ್ನಡ ಸಮಕಾಲಿಕ ಅನುವಾದ9 ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಆದರೆ ಅವರು ಯುದ್ಧಭಟರಾಗಿಯೂ, ಅಧಿಪತಿಗಳಲ್ಲಿ ಪ್ರಧಾನರಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು. ಅಧ್ಯಾಯವನ್ನು ನೋಡಿ |